ಬೆಂಗಳೂರು, ಮಾ.22 (Daijiworld News/MB) : ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸೇರಿ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹರಡುವ ಹಿನ್ನಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದೂಡಲಾಗುವುದು ಎಂದು ತಿಳಿಸಿದ್ದಾರೆ.
ಹಾಗೆಯೇ ಕರ್ನಾಟಕದ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು. ನಗರದ ಜನರು ಹಳ್ಳಿಗಳಿಗೆ ಹೋಗಬೇಡಿ ಎಂದೂ ಹೇಳಿದ್ದಾರೆ.
ಮಾರ್ಚ್ 27 ರಂದು ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನಲೆಯಿಂದಾಗಿ ಪರೀಕ್ಷೆ ನಡೆಸುವ ಬಗ್ಗೆ ಮಾರ್ಚ್ 23 ರಂದು ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು.