ಮುಂಬೈ, ಮಾ.22 (DaijiworldNews/PY) : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಈ ವ್ಯಕ್ತಿ ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್ನಲ್ಲಿ ಶನಿವಾರ ರಾತ್ರಿ ಸುಮಾರು 11.30ಕ್ಕೆ ಸಾವನ್ನಪ್ಪಿದ್ದಾರೆ. ಅದೇ ಸಂದರ್ಭ ಸೋಂಕಿನಿಂದ ಬಿಹಾರದಲ್ಲಿಯೂ ಒಬ್ಬರು ಮೃತಪಟ್ಟಿರುವುದು ವರದಿಯಾಗಿದೆ.
ಇದೀಗ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟವರ ಸಂಖ್ಯೆ 2 ಆಗಿದ್ದು, ಭಾರತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ.