ಬೆಂಗಳೂರು, ಮಾ.22 (Daijiworld News/MB) : ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರುವ ಇಟಲಿ ಸೇರಿದಂತೆ ಹೊರದೇಶಗಳಿಂದ ಕಳೆದ ಎರಡು ದಿನಗಳಿಂದ ಕರ್ನಾಟಕಕ್ಕೆ 22,000 ಜನರು ಆಗಮಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ರಾಜ್ಯಕ್ಕೆ ಕಳೆದ 2 ದಿನಗಳಿಂದ ಇಂದು ಮಧ್ಯರಾತ್ರಿ ವರೆಗೆ ಇಟಲಿ ಸೇರಿ ಹೊರದೇಶಗಳಿಂದ 22000 ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಇವರಿಂದ ಸುರಕ್ಷಿತವಿರಲು ಸರ್ಕಾರ ತುರ್ತಾಗಿ ನಗರದ ಅಗತ್ಯವಿರುವ ಹೋಟೆಲ್ಗಳನ್ನು ವಶಪಡಿಸಿಕೊಂಡು ಕ್ವಾರಂಟೈನ್ ಮಾಡುವುದು ಅನಿವಾರ್ಯ. ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇ ಇದ್ದು ಪ್ರಸ್ತುತ 21 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬ ವಿದೇಶಿ ಪ್ರಯಾಣಿಕನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಆಂತರಿಕ ವಿಮಾನದಲ್ಲಿ ಬರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ.