ಬೆಂಗಳೂರು, ಮಾ.23 (Daijiworld News/MB) : ಖ್ಯಾತ ನಿರ್ಮಾಪಕ, ಉದ್ಯಮಿ ವಿ.ಕೆ.ಮೋಹನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿನಿಮಾ ನಿರ್ಮಾಪಕರಾಗಿ, ಹೋಟೆಲ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯ ಮೋಹನ್ ಅವರು ಪೀಣ್ಯದಲ್ಲಿರುವ ಹೋಟೆಲ್ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಡಾ.ರಾಜಕುಮಾರ್ ಅವರ ಕುಟುಂಬದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದ ವಿಕೆ ಮೋಹನ್ ಅವರು ಕಳೆದ ಹಲವು ಸಮಯಗಳಿಂದಲೂ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.
ಕಳೆದ ಬಾರಿ ವಿಕೆ ಮೋಹನ್ ಅವರಿಗೆ ಸೇರಿದ ಕ್ಲಬ್ ಮೇಲೆ ದಾಳಿ ನಡೆದಿದ್ದು ಅವರನ್ನು ಬಂಧನ ಮಾಡಲಾಗಿತ್ತು. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿದ್ದಾರೆ ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ ಮಾಡಿದ್ದು ಇದೇ ನೋವಿನಿಂದಾಗಿ ಆರ್ಥಿಕವಾಗಿ ತೊಂದರೆಯಲ್ಲಿದ್ದರು ಎಂದು ಹೇಳಲಾಗಿದೆ.
ಭಾನುವಾರ ರಾತ್ರಿ ಹೋಟೆಲ್ಗೆ ಬಂದಿದ್ದ ಮೋಹನ್ ಅವರು ಇಂದು ರೂಮ್ ಬಾಗಿಲು ತೆಗೆಯದೇ ಇದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಕಿಟಕಿಯಲ್ಲಿ ನೋಡಿದಾಗ ನೇಣಿಗೆ ಶರಣಾಗಿರುವುದು ಕಂಡುಬಂದಿದೆ.