ನವದೆಹಲಿ, ಮಾ 23 (Daijiworld News/MSP): ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೇಶದ ಹಲವು ನಗರ, ಜಿಲ್ಲೆ, ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಆದರೂ ಕೆಲವರು ಲಾಕ್ ಡೌನ್ ಬ್ರೇಕ್ ಅದು ತಮಗೆ ಸಂಬಂಧಿಸಿದಲ್ಲವೆಂಬತೆ ಜವಾಬ್ದಾರಿ ಮರೆತಯ ತಿರುಗಾಡುತ್ತಿದ್ದಾರೆ. ಹೀಗಾಗಿ ಈ ನಿರ್ಲಕ್ಷ್ಯವನ್ನು ತಡೆಯಲು ಜನರೇ ಸ್ವಯಂ ನಿರ್ಬಂಧ ವಹಿಸುತ್ತಾರೆ ಎಂದುಕೊಂಡಿದ್ದ ಕೇಂದ್ರ ಸರ್ಕಾರ ಲಾಕ್ ಡೌನ್ ಗಣನೆಗೆ ತೆಗೆದುಕೊಳ್ಳದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸರ್ಕಾರ ಲಾಕ್ ಡೌನ್ ಬ್ರೇಕ್ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಪ್ರಧಾನಿ ಮೋದಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರಗಳು ಲಾಕ್ ಡೌನ್ ಗೆ ಬೇಕಿರುವ ಕಾನೂನು ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದ್ದರು. ಇದರೊಂದಿಗೆ ಜನರಿಗೆ ನಿಮ್ಮನ್ನು ನೀವು ಕಾಪಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ಲಾಕ್ ಡೌನ್ ರೂಲ್ಸ್ ಮೀರಿದರೆ ಅವರ ವಿರುದ್ಧ ಕಠಿಣ ಕ್ರಮ ಗ್ಯಾರಂಟಿ.