ಬೆಂಗಳೂರು, ಮಾ 23 (DaijiworldNews/SM): ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗಿದೆ.ಇದೀಗ ಸೋಂಕಿತರ ಸಂಖ್ಯೆ 33ಕ್ಕೇರಿಕೆಯಾಗಿದೆ.
ಇಂದು ಒಂದೇ ದಿನದಲ್ಲಿ 7 ಪ್ರಕರಣ ಪಾಸಿಟಿವ್ ಪತ್ತೆಯಾಗಿವೆ. ಆ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 33ಕ್ಕೇರಿಕೆಯಾದಂತಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಅಧೀಕೃತ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಈ ಹಿಂದೆ ಸೋಂಕು ತಗುಲಿದ್ದ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದಾರೆ. ಮಾ.21ರಂದು ಐವರಲ್ಲಿ ಸೋಂಕು ಪತ್ತೆಯಾಗಿತ್ತು. ಮಾ.22ರಂದು 6 ಜನರಲ್ಲಿ ಸೋಂಕು ದೃಢಪಟ್ಟಿತ್ತು.
ಇದೀಗ ದಿನದಿಂದ ದಿನಕ್ಕೆ ಸೋಂಕಿತರ ಸಖ್ಯೆ ಹೆಚ್ಚಾಗುತ್ತಿದೆ. ಇದೇ ಕಾರಣದಿಂದಾಗಿ ಎಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಜನತೆ ಭಯಭೀತರಾಗದೆ, ಅಸಡ್ಡೆ ತೋರದೆ, ಎಚ್ಚರಿಕೆ ವಹಿಸುವ ಅಗತ್ಯತೆ ಇದೆ.