ಶ್ರೀನಗರ, ಮಾ.24 (DaijiworldNews/PY) : ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ತೀರ್ಮಾನ ವಿರೋಧಿಸಿ ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಮಂಗಳವಾರ ಬಿಡುಗಡೆಯಾಗಿದ್ದಾರೆ.
ಜಮ್ಮು-ಕಾಶ್ಮೀರದ ಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಗೃಹ ಬಂಧನದಲ್ಲಿ ಇರಿಸಲಾಗಿದ್ದ ಎಲ್ಲಾ ರಾಜಕೀಯ ನಾಯಕರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಗೃಹ ಬಂಧನದಿಂದ ಈಗಾಗಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಬಿಡುಗಡೆಯಾಗಿದ್ದು, ಮಂಗಳವಾರ ಅವರ ಪುತ್ರ ಅಬ್ದುಲ್ಲಾ ಅವರಿಗೆ ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ.