ನವದೆಹಲಿ, ಮಾ.24 (DaijiworldNews/PY) : ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆ ಶಾಹೀನ್ ಬಾಗ್ನಲ್ಲಿ ಸಿಎಎ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಈ ಸಂದರ್ಭ ಪೊಲೀಸರು 9 ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಶಾಹೀನ್ ಬಾಗ್ನಲ್ಲಿ ಮಹಿಳಾ ಪ್ರತಿಭಟನಾಕಾರರು ಪ್ರತಿಭಟನೆ ಮಾಡುತ್ತಿದ್ದರು. ಪ್ರತಿಭಟನಾಕಾರರಲ್ಲಿ ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರತಿಭಟನೆ ತೆರವುಗೊಳಿಸುವಂತೆ ಮನವಿ ಮಾಡಲಾಯಿತು. ಆದರೂ ಅವರು ಇದಕ್ಕೆ ಒಪ್ಪಲಿಲ್ಲ. ಬಳಿಕ ಬಲವಂತವಾಗಿ ತೆರವುಗೊಳಿಸಲಾಯಿತು ಎಂದು ಆಗ್ನೇಯ ದೆಹಲಿ ಡಿಸಿಪಿ ಆರ್.ಪಿ. ಮೀನಾ ತಿಳಿಸಿದ್ದಾರೆ.