ಬೆಂಗಳೂರು, ಮಾ.24 (DaijiworldNews/PY) : ಬಿಜೆಪಿ ಶಾಸಕ ಆನಂದ ಮಾಮನಿ ಅವರು ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಸವದತ್ತಿ ಎಲ್ಲಮ್ಮ ಕ್ಷೇತ್ರದಿಂದ ಆನಂದ ಮಾಮನಿ ಅವರು ಸತತ ಮೂರನೇ ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ.
1996-1999 ರ ಅವಧಿಯಲ್ಲಿ ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಅವರು ಉಪ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಕೃಷ್ಣಾರೆಡ್ಡಿ ಅವರು ವಿಧಾನಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಕಾರಣ ಈ ಸ್ಥಾನ ತೆರವಾಗಿತ್ತು. ಇದೀಗ ಆ ಸ್ಥಾನಕ್ಕೆ ಮಾಮನಿ ಅವರನ್ನು ನೇಮಕ ಮಾಡಲಾಗಿದೆ.