ಬೆಂಗಳೂರು, ಮಾ.24 (DaijiworldNews/PY) : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಇಡೀ ರಾಜ್ಯವನ್ನು ಲಾಕ್ಡೌನ್ ಮಾಡಿದ್ದು, ಪ್ರಥಮ ಪಿಯು ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಲಾಗಿದೆ.
ಈ ಹಿಂದೆ ಮಾ. 27ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿತ್ತು.
ಕೊರೊನಾ ವೈರಸ್ ಹಿನ್ನೆಲೆ ಪ್ರಥಮ ಪಿಯು ಫಲಿತಾಂಶ ಪ್ರಕಟಣೆಯನ್ನು ಮುಂದೂಡಲಾಗಿದ್ದು, ಮಾ.31ರ ನಂತರ ಫಲಿತಾಂಶ ಪ್ರಕಟಣೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.