ಮಧುರೈ, ಮಾ.25 (Daijiworld News/MB) : ಇಲ್ಲಿನ ರಾಜಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ವೈರಸ್ ಸೋಂಕಿತ 54 ವರ್ಷದ ವ್ಯಕ್ತಿ ಬುಧವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಮೊದಲ ಕೊರೊನಾ ಸಾವು ಸಂಭವಿಸಿದಂತಾಗಿದೆ ಎಂದು ಆರೋಗ್ಯ ಸಚಿವ ಸಿ.ವಿಜಯ ಭಾಸ್ಕರ್ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿದೆ.
ಈ ವ್ಯಕ್ತಿ ಅತೀಯಾದ ಡಯಾಬಿಟೀಸ್ ನಿಂದ ಬಳಲುತ್ತಿದ್ದರು. ತಮಿಳುನಾಡಿನಲ್ಲಿ ಮತ್ತೆ ಕೋವಿಡ್ 19 ಸೋಂಕಿಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.