ನವದೆಹಲಿ, ಮಾ.25 (DaijiworldNews/PY) : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ.
ಮುಂದಿನ ಆದೇಶದವರೆಗೆ ೨೦೨೧ರ ಮೊದಲ ಹಂತದ ಜನಗಣತಿ ಹಾಗೂ ಎನ್ಪಿಆರ್ ಅನ್ನು ಮುಂದೂಡಲಾಡಗಿದೆ ಎಂದು ಗೃಹ ಸಚಿವಾಲಯ ತಿಳಿಸಿರುವುದಾಗಿ ವರದಿ ತಿಳಿಸಿದೆ.
ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಿಎಎ, ಎನ್ಆರ್ಸಿಯಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಇತ್ತೀಚೆಗೆ ಒತ್ತಾಯಿಸಿದ್ದವು.