ನವದೆಹಲಿ, ಮಾ.26 (Daijiworld News/MB) : ಬುಧವಾರ ರಾತ್ರಿಯಿಂದಲ್ಲೇ ದೇಶದ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹಣೆಯನ್ನು ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ರದ್ದು ಮಾಡಿದೆ.
ಕೊರೊನಾ ಹಿನ್ನಲೆಯಲ್ಲಿ ದೇಶದ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ ರದ್ದು ಮಾಡಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ತೀರ್ಮಾನವನ್ನು ತುರ್ತು ಸೇವೆಗಳಿರುವ ತೊಂದರೆ ನಿವಾರಿಸುವ ದೃಷ್ಟಿಯಿಂದಷ್ಟೆ ಕೈಗೊಂಡಿಲ್ಲ, ಬದಲಾಗಿ ಸಮಯ ಉಳಿಸುವ ನಿಟ್ಟಿನಲ್ಲಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ.