ಬೆಂಗಳೂರು,ಮಾ 26 (Daijiworld News/MSP) : ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನಲೆಯಲ್ಲಿ ಎಸೆಸೆಲ್ಸಿ ಹಾಗೂ 7 ರಿಂದ 9 ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಮುಂದೂಡಲಾಗಿದ್ದು, ಈ ಎಲ್ಲಾ ತರಗತಿಗಳ ಪರಿಷ್ಕೃತ ವೇಳಾಪಟ್ಟಿಯನ್ನು ಎಪ್ರಿಲ್ 20ರ ಬಳಿಕ ನಿರ್ಧರಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.
ದೇಶದಾದ್ಯಂತ ಎ.15ರವರೆಗೆ ಲಾಕ್ ಡೌನ್ ಮುಂದುವರಿಯಲಿದ್ದು, 7ರಿಂದ 9ನೇ ತರಗತಿ ಪರೀಕ್ಷೆಗಳನ್ನು , ಎಸೆಸೆಲ್ಸಿ ಪರೀಕ್ಷೆಗಳನ್ನು, ಆರ್ ಟಿಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಹಾಗು ಶಾಲೆಗಳಲ್ಲಿ 2020-21ನೆ ಸಾಲಿಗೆ ದಾಖಲಾತಿ ಪ್ರಕ್ರಿಯೆಗಳನ್ನು ಎಪ್ರಿಲ್ 20ರವರೆಗೆ ಮುಂದೂಡಲಾಗಿದೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.