ನವದೆಹಲಿ, ಮಾ.26 (Daijiworld News/MSP) : ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿರುವ 1.70 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಅನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸ್ವಾಗತಿಸಿದ್ದು, "ಇದು ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆ" ಎಂದು ಹೇಳಿದ್ದಾರೆ.
"ಜನಸಾಮಾನ್ಯರ ಜೀವನಕ್ಕಾಗಿ ಸರ್ಕಾರ ಘೋಷಿಸಿದ ಆರ್ಥಿಕ ನೆರವಿನ ಪ್ಯಾಕೇಜ್ ಸ್ವಾಗತಾರ್ಹ. ಈ ಮೂಲಕ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಿದೆ. ಲಾಕ್ಡೌನ್ನಿಂದ ತೊಂದರೆಗೆ ಒಳಗಾಗಿರುವ ರೈತರು, ದಿನಗೂಲಿ ಕೆಲಸಗಾರರು, ಕಾರ್ಮಿಕರು, ಮಹಿಳೆಯರು ಮತ್ತು ವೃದ್ಧರ ಹೊಣೆಯನ್ನು, ಅವರ ಸಾಲದ ಹೊರೆಯನ್ನು ಈಗ ಭಾರತ ಹೊತ್ತುಕೊಳ್ಳಬೇಕು" ಎಂದು ರಾಹುಲ್ ಗಾಂಧಿ ಹೊಗಳಿದ್ದಾರೆ.
ಕರೊನಾ ಲಾಕ್ಡೌನ್ ಸಂದರ್ಭದಲ್ಲಿ ಬಡವರು, ವಲಸಿಗರು, ಮಹಿಳೆಯರು ಮತ್ತು ಇತರೆ ಶ್ರಮಿಕ ವರ್ಗದವರು, ಕರೊನಾ ವಿರುದ್ಧ ಹೋರಾಡುತ್ತಿರುವವರ ಜೀವನ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಿಸಿದೆ.