ಬೆಂಗಳೂರು, ಮಾ.26 (DaijiworldNews/PY) : ಪ್ರಧಾನಿ ಮೋದಿ ಅವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಿಎಂ ಬಿಎಸ್ವೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿಡಿಯೋ ಕಾನ್ಫರೆನ್ಸ್ನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಅವರು, ಲಾಕ್ಡೌನ್ ಉಲ್ಲಂಘಿಸಿ ಹೊರಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು.
ಎಲ್ಲಾ ಜಿಲ್ಲೆಯ ಬಾರ್ಡರ್ಗಳನ್ನು ಸೀಲ್ ಮಾಡಬೇಕು. ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ನೀಡುವಂತೆ ಸೂಚಿಸಲಾಯಿತು.
ಡಿಸ್ಟಲರಿ ಕಂಪನಿಗಳ ಜೊತೆ ಈಗಾಗಲೇ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದ್ದು, ಉಚಿತವಾಗಿ ಕೆಲವು ಕಂಪೆನಿಗಳು ನೀಡಲು ಮುಂದೆ ಬಂದಿವೆ ಅದರ ಸದಾವಕಾಶ ಉಪಯೋಗಿಸಿಕೊಳ್ಳಲು ತಿಳಿಸಿದರು.
ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ನಿಮ್ಮ ಸಮಸ್ಯೆ ಏನೇ ಇದ್ದರೂ ಕೂಡಲೇ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್ಗಳನ್ನು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ದ ಕ್ರಮ ತೆಗೆದುಕೊಳ್ಳಲು ತಿಳಿಸಲಾಯಿತು.
ಹೆಚ್ಚಿನ ಬೆಲೆಗೆ ದಿನನಿತ್ಯ ಬಳಸುವ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಬೇಕು. ಕನಿಷ್ಠ 50 ಬೆಡ್ ಪ್ರತಿ ಜಿಲ್ಲೆಯಲ್ಲಿ ಕೊರೊನಾಗಾಗಿ ಮೀಸಲಿಡುವಂತೆ ಸೂಚನೆ ನೀಡಿದರು. ವೈದ್ಯರು ಹಾಗೂ ನರ್ಸ್ ಗಳಿಗೆ ತೊಂದರೆ ನೀಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.