ನವದೆಹಲಿ, ಮಾ.26 (DaijiworldNews/PY) : ಭಾರತದಲ್ಲಿ ಕೊರೊನಾ ವೈರಸ್ ಸಂಖ್ಯೆ ಹೆಚ್ಚಾಗುತ್ತಿರುವುದು ಎಲ್ಲರಲ್ಲೂ ಆತಂಕ ಸೃಷ್ಠಿಯಾಗಿದೆ. ಆದರೆ, ಈ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಜನರ ಆತಂಕಗೊಳಿಸಿದೆ.
ಕೊರೊನಾ ವೈರಸ್ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, ಸಮುದಾಯದಲ್ಲಿ ಕೊರೊನಾ ವೈರಸ್ ಹರಡಿರುವುದನ್ನು ತಳ್ಳಿಹಾಕಿದ್ದಾರೆ. ಎಂದು ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಕೊರೊನಾ ಹರಡುವಿಕೆ ಪ್ರಮಾಣ ಸ್ಥಿರವಾಗಿದೆ. ಇದು ಆರಂಭಿಕ ಟ್ರೆಂಡ್ ಆಗಿದ್ದು, ಭಾರತ ಕೊರೊನಾ ಸವಾಲನ್ನು ಎದುರಿಸಲು ಸನ್ನದ್ದವಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಅಗತ್ಯ ಸಾಮಗ್ರಿಗಳ ಉತ್ಪಾದನೆ ಹಾಗೂ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನತೆ ಭಯ ಪಡುವ ಅಗತ್ಯವಿಲ್ಲ, ರಾಜ್ಯ ಸರ್ಕಾರಗಳು ವಲಸಿಗ ಕಾರ್ಮಿಕರಿಗೆ ಆಹಾರ ವಸತಿ ನೀಡಲು ಕ್ರಮ ಕೈಗೊಂಡಿವೆ ಎಂದು ತಿಳಿಸಿದ್ದಾರೆ.
42 ಹೊಸ ಕೊರೋನಾ ಸೋಂಕಿತ ಪ್ರಕರಣಗಳು 24 ಗಂಟೆಗಳಲ್ಲಿ ವರದಿಯಾಗಿದ್ದು, 2 ಸಾವು ಸಂಭವಿಸಿದೆ. ಕೊರೋನಾ ಸೋಂಕು ಪೀಡಿತರ ಸಂಖ್ಯೆ 649 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.