ಹಾಸನ, ಮಾ.29 (Daijiworld News/MB) : ಹೋಂ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಮನೆಯಿಂದ ಹೊರಗಿನ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚನಹಳ್ಳಿಯಲ್ಲಿ ನಡೆದಿದೆ.
52 ವರ್ಷದ ಈ ವ್ಯಕ್ತಿ ಮುಂಬೈನಿಂದ ಮೂರು ದಿನಗಳ ಹಿಂದೆ ತನ್ನ ಊರಿಗೆ ಬಂದಿದ್ದು ಆರೋಗ್ಯ ತಪಾಸಣೆ ನಡೆಸಿದ ವೈದ್ಯರು 14 ದಿನ ಪ್ರತ್ಯೇಕವಾಗಿ ಇರುವಂತೆ ತಿಳಿಸಿದ್ದರು.
ಮೃತ ವ್ಯಕ್ತಿಯು ಅಸ್ತಮಾ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಮುಂಬೈನಲ್ಲಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಬಿಟ್ಟು ಒಬ್ಬರೇ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.