ನವದೆಹಲಿ, ಮಾ 29 (Daijiworld News/MSP): ಭಾರತದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಭಾನುವಾರ 26ಕ್ಕೇರಿದೆ. ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 40 ವರ್ಷದ ಮಹಿಳೆ ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು, ಮಹಾರಾಷ್ಟ್ರ ಸೋಂಕಿಗೆ ಮೃತಪಟ್ಟವರ ಸಂಖ್ಯೆ7ಕ್ಕೇರಿದೆ. ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಮೃತಪಟ್ಟಿರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.
ಭಾರತದ ಮಹಾರಾಷ್ಟ್ರ, ಕೇರಳ, ತೆಲಂಗಾಣ, ಗುಜರಾತ್, ಕರ್ನಾಟಕ, ಮಧ್ಯ ಪ್ರದೇಶ, ತಮಿಳು ನಾಡು, ಬಿಹಾರ, ಪಂಜಾಬ್, ದೆಹಲಿ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶಗಳಲ್ಲಿ ಕೊರೋನಾ ವೈರಸ್ ನಿಂದ ರೋಗಿಗಳು ಮೃತಪಟ್ಟಿದ್ದಾರೆ.