ನವದೆಹಲಿ,ಮಾ 29 (Daijiworld News/MSP): ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ರೂ ಜನ ಅನಗತ್ಯವಾಗಿ ಮನೆಯಿಂದ ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿ ಕ್ರಮಕೈಗೊಳ್ಳಲು ಮುಂದಾಗಿದೆ.
ಲಾಕ್ ಡೌನ್ ಸರಿಯಾಗಿ ಪಾಲಿಸಲೇಬೇಕು, ನಿಯಮಮ ಉಲ್ಲಂಘಿಸಿದವರನ್ನು 14 ದಿನ ಕಡ್ಡಾಯ ಕ್ವಾರಂಟೈನ್ ನಲ್ಲಿ ಇಡಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳು ಖಡಕ್ ಸೂಚನೆ ನೀಡಿದೆ.
ಲಾಕ್ ಡೌನ್ ನಿಯಮ ಕಟ್ಟುನಿಟ್ಟಿನ ಜಾರಿಗೆ ಎಲ್ಲಾ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸೂಚಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ 14 ದಿನಗಳ ಕಾಲ ಕ್ವಾರಂಟೈನ್ ಗಳಲ್ಲಿ ಇಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಗುಳೆ ಕಾರ್ಮಿಕರ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ, ಗುಳೆ ಎದ್ದಿರುವ ಜನರಿಗೆ ಪರಿಸ್ಥಿತಿಯ ಮನವರಿಕೆ ಮಾಡಿ, ಅಲ್ಲದೆ ಆಯಾ ರಾಜ್ಯದ ಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ನಿರಾಶ್ರಿತ ಗುಳೆ ಕಾರ್ಮಿಕರಿಗೆ ತಕ್ಷಣ ಆಹಾರ, ಆಶ್ರಯದ ವ್ಯವಸ್ಥೆ ಮಾಡಿ ಎಂದು ಸೂಚಿಸಿದೆ.