ನವದೆಹಲಿ: ಮಾ 29 (DaijiworldNews/SM): ಕೊರೊನಾ ಸೋಂಕಿನಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ ಸುಮಾರು 106 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ಮಾಹಿತಿ ನೀಡಿದ್ದು, ಈವರೆಗೂ 25 ಸಾವಿನ ಪ್ರಕರಣಗಳು ಸೇರಿದಂತೆ ದೇಶದಲ್ಲಿ 1070 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂಬುವುದಾಗಿ ಮಾಹಿತಿ ನೀಡಿದ್ದಾರೆ.
ಇನ್ನು ದೇಶದೆಲ್ಲಡೆ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 113 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್-19 ಪರೀಕ್ಷೆ ನಡೆಸಲು 47 ಖಾಸಗಿ ಪ್ರಯೋಗಾಲಯಗಳಿಗೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.