ನವದೆಹಲಿ, ಮಾ.30 (DaijiworldNews/PY) : ಕೊರೊನಾ ತಡೆಗಟ್ಟುವ ನ್ನೆಲೆ ದೆಹಲಿಯಲ್ಲಿ ಲಾಕ್ಡೌನ್ ಜಾರಿಗೊಳಿಸಲು ವಿಫಲರಾದ ಕಾರಣದಿಂದ ದೆಹಲಿ ಸರ್ಕಾರದ ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಇನ್ನಿಬ್ಬರು ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಮುಂದಾಗಿದೆ.
ದೆಹಲಿ ಸರ್ಕಾರದ ಸಾರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, 1988ನೇ ಬ್ಯಾಚ್ ಐಎಎಸ್ ಅಧಿಕಾರಿ ರೇಣು ಶರ್ಮಾ ಮತ್ತು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ, 1992 ಬ್ಯಾಚ್ ಐಎಎಸ್ ಅಧಿಕಾರಿ ರಾಜೀವ್ ವರ್ಮಾ ಅವರನ್ನು ಕೇಂದ್ರ ಗೃಹ ಇಲಾಖೆ ಅಮಾನತು ಗೊಳಿಸಿದೆ.
ಸರ್ಕಾರ ನೀಡಿರುವ ಲಾಕ್ಡೌನ್ ಆದೇಶವನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ತಿಳಿದುಬಂದಿರುವುದು ಕೇಂದ್ರ ಗೃಹ ಸಚಿವಾಲಯದ ಗಮನಕ್ಕೆ ಬಂದಿದೆ. ಪೂರ್ಣವಾಗಿ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲು ವಿಫಲರಾಗಿದ್ದು, ಸರ್ಕಾರ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.
ಗೃಹ ಸಚಿವಾಲಯದ ಅಧಿಕಾರಿಗಳು ದೆಹಲಿ ಸರ್ಕಾರದ ಭೂಮಿ ಮತ್ತು ಭವನ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಸೀಲಂಪುರದ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.
ನಾಲ್ವರು ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಲು ಸೂಕ್ತ ಕಾರಣ ತಿಳಿದು ಬಂದಿಲ್ಲ. ವಲಸೆ ಕಾರ್ಮಿಕರನ್ನು ಕಳೆದ ಎರಡು ದಿನಗಳಿಂದ ದೆಹಲಿ–ಉತ್ತರ ಪ್ರದೇಶ ಗಡಿ ಭಾಗಗಳಿಗೆ ತಲುಪಿಸಲು ದೆಹಲಿ ಸಾರಿಗೆ ಸಂಸ್ಥೆ (ಡಿಟಿಸಿ) ನಡೆಸಿರುವ ವ್ಯವಸ್ಥೆಗಳಿಗೆ ಸಂಬಂಧಿಸಿದಾಗಿದೆ ಎನ್ನಲಾಗಿದೆ. ದೆಹಲಿ ಪೊಲೀಸರು ವಲಸೆ ಕಾರ್ಮಿಕರನ್ನು ಒಳಗೊಂಡ 44 ಡಿಟಿಸಿ ಬಸ್ಗಳು ಉತ್ತರ ಮೊದಲ ಎಫ್ಐಆರ್ನಲ್ಲಿ ಸರ್ಕಾರದ ಅಧಿಕಾರಿಗಳ ಆದೇಶದ ಮೇರೆಗೆ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಯಾವುದೇ ಟಿಕೆಟ್ ಶುಲ್ಕ ವಲಸೆ ಕಾರ್ಮಿಕರಿಗೆ ವಿಧಿಸದೇ ಅವರನ್ನು ಉತ್ತರ ಪ್ರದೇಶದ ಗಡಿ ಭಾಗಗಳಿಗೆ ಸಾಗಿಸಲಾಗಿದೆ. ಮೇಲಿನ ಅಧಿಕಾರಿಗಳ ಆದೇಶದಂತೆ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಬಸ್ನ ಸಿಬ್ಬಂದಿ ತಿಳಿಸಿರುವುದಾಗಿ ವರದಿಯಾಗಿದೆ.
ಗಡಿ ಭಾಗಗಳಲ್ಲಿ ಸಾವಿರಾರು ವಲಸೆ ಕಾರ್ಮಿಕರು ಗುಂಪಾಗಿ ಸೇರಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ಸರ್ಕಾರದ ಸೂಚನೆಯನ್ನು ಉಲ್ಲಂಘನೆ ಮಾಡಿದಂತಾಗಿದೆ. ಕೇಂದ್ರ ಸರ್ಕಾರ ರಾಜ್ಯಗಳ ಗಡಿ ಭಾಗಗಳನ್ನು ಬಂದ್ ಮಾಡುವಂತೆ ಸರ್ಕಾರಗಳಿಗೆ ಆದೇಶ ನೀಡಿದೆ. ವಲಸೆ ಕಾರ್ಮಿಕರ ಸಂಚಾರವನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಊರುಗಳನ್ನು ಈಗಾಗಲೇ ಸೇರಿರುವವರು 14 ದಿನ ಪ್ರತ್ಯೇಕ ವಾಸ ಅನುಸರಿಸುತ್ತಿರುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.