ಕೋಲ್ಕತ್ತಾ, ಮಾ.30 (Daijiworld News/MB) : ಕೊರೊನಾ ಸೋಂಕಿತ ಮಹಿಳೆಯೊಬ್ಬರು ಉತ್ತರ ಬಂಗಾಳದ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಪಶ್ಚಿಮ ಬಂಗಾಳದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿದೆ.
ಡಾರ್ಜಿಲಿಂಗ್ ಜಿಲ್ಲೆಯ ಕಾಲಿಂಪಾಂಗ್ನ 44 ವರ್ಷದ ಮಹಿಳೆ ಮುಂಜಾನೆ 2 ಗಂಟೆ ಸುಮಾರಿಗೆ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಚೆನೈನಲ್ಲಿ ಮಗಳ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಇತ್ತೀಚೆಗೆ ಅಲ್ಲಿಂದ ಹಿಂದಿರುಗಿದ್ದರು. ಅವರ ಮಗಳು ಹಾಗೂ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಕ್ವಾರೆಂಟೈನ್ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೋಲ್ಕತ್ತಾದ ವೃದ್ಧೆಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದರು.
ಪಶ್ಚಿಮ ಬಂಗಾಳದಲ್ಲಿ ಈವರೆಗೆ 21 ಕೊರೊನಾ ಪ್ರಕರಣಗಳು ದೃಡಪಟ್ಟಿದೆ.