ಬೆಂಗಳೂರು, ಮಾ.31(DaijiworldNews/PY) : ಮೊದಲು ಚೀನಾದ ವುಹಾನ್ ಪಟ್ಟಣದಲ್ಲಿ ಪ್ರಾರಂಭವಾದ ಕೊರೊನಾ ಸೋಂಕು ವಿಶ್ವದಾದ್ಯಂತ ವ್ಯಾಪಿಸಿದೆ. ಸೋಂಕು ನಮ್ಮ ರಾಜ್ಯದಲ್ಲೂ ವ್ಯಾಪಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ. ಸೋಂಕಿನ ವಿರುದ್ದದ ಹೋರಾಟಕ್ಕೆ ನಟರು, ಗಣ್ಯ ವ್ಯಕ್ತಿಗಳು ಸಹಾಯ ಹಸ್ತ ಚಾಚಿದ್ದು, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು 50 ಲಕ್ಷ ರೂ ನೀಡಿದ್ದಾರೆ.
ಪುನೀತ್ ರಾಜ್ಕುಮಾರ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪರಿಹಾರ ನಿಧಿಗೆ 50 ಲಕ್ಷ ರೂ ನೆರವು ನೀಡಿದರು.
ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಅಧಿಕವಾಗುತ್ತಿದ್ದು, ಇದುವರೆಗೆ ರಾಜ್ಯದಲ್ಲಿ ಸುಮಾರು 91 ಜನರಿಗೆ ಸೋಂಕು ತಗುಲಿದ್ದು ಮೂವರು ಮೃತಪಟ್ಟಿದ್ದಾರೆ.