ಮುಂಬೈ, ಮಾ 31 (DaijiworldNews/SM): ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಹಾವಳಿ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರದಂದು ಒಂದೇ ದಿನ ಬರೊಬ್ಬರಿ 72 ಮಂದಿಯಲ್ಲಿ ವೈರಸ್ ಸೋಂಕು ಕಾಣಿಸಿಕೊಂಡಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ ಗರಿಷ್ಟ ಪ್ರಕರಣಗಳು ದಾಖಲಾಗಿದೆ. ಮುಂಬೈ ಮಹಾನಗರಿಯೊಂದರಲ್ಲೇ 59 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಮುಂಬೈನಲ್ಲಿ ನೆಲೆಸಿರುವವರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ನಿರಂತರ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ 302ಕ್ಕೆ ತಲುಪಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಇದೇ ಮೊದಲು ಎಂಬಂತೆ ಇಷ್ಟು ದೊಡ್ಡ ಮಟ್ಟದಲ್ಲಿ ಸೋಂಕು ಹರಡಿದಂತಾಗಿದೆ. ಮಹಾರಾಷ್ಟ್ರ ಮಾತ್ರವಲ್ಲದೆ, ದೇಶದಲ್ಲೇ ಇಷ್ಟೊಂದು ಸಂಖ್ಯೆಯಲ್ಲಿ ಸೋಂಕಿತ ಪ್ರಕರಣಗಳು ದಾಖಲಾಗುವುದು ಇದೇ ಮೊದಲು ಎನ್ನಲಾಗಿದೆ.