ಬೆಂಗಳೂರು, ಎ.01 (DaijiworldNews/PY) : ಕೊರೊನಾ ಸೋಂಕು ವ್ಯಾಪಿಸದಂತೆ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಈ ನಡುವೆ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎಚ್ಡಿಕೆ ಜನತಾ ದಾಸೋಹ ಪ್ರಾರಂಭಿಸಿದ್ದಾರೆ.
ಲಾಕ್ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ, ಬಡವರಿಗೆ ನಿತ್ಯ ಆಹಾರ ನೀಡುವುದು ಎಚ್ಡಿಕೆ ಜನತಾ ದಾಸೋಹದ ಗುರಿಯಾಗಿದೆ. ಅಲ್ಲದೇ, ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತೀ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.
ಸದ್ಯ ದಾಸೋಹವನ್ನು ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ಪ್ರಾರಂಭಿಸಲಾಗಿದ್ದು, ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಈ ನಡೆಯನ್ನೇ ಆರಂಭಿಸಬೇಕು ಎಂದೂ ಎಚ್ಡಿಕೆ ಅವರು ಈಗಾಗಲೇ ತಿಳಿಸಿದ್ದಾರೆ.
ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ತೀರ್ಮಾನಿಸಿದ್ದಾರೆ. ಇದಕ್ಕಾಗಿ ಮಾಹಿತಿ ಕಾರ್ಯಾ ಪ್ರಾರಂಭವಾಗಿದ್ದು, ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.