ಇಂದೋರ್,ಏ 2 (Daijiworld News/MSP): ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಸಿಬ್ಬಂದಿ ಆಗಮಿಸಿದಾಗ ಸ್ಥಳೀಯರು ಅವರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮದ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಘಟನೆಯಿಂದ ಇಬ್ಬರು ಮಹಿಳಾ ವೈದ್ಯರು ಗಾಯಗೊಂಡಿದ್ದಾರೆ.
ಇಂದೋರ್ನ ಟಾಟಪಟ್ಟಿ ಬಖಾಲ್ ಗೆ ಬುಧವಾರ ಮೂವರು ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಐವರ ತಂಡ ಕೊರೊನಾ ಶಂಕಿತ ನಿರ್ದಿಷ್ಟ ವ್ಯಕ್ತಿಯ ಪರೀಕ್ಷೆಗಾಗಿ ಸ್ಥಳಕ್ಕೆ ತೆರಳಿ ಆ ವ್ಯಕ್ತಿಗಾಗಿ ವಿಚಾರಿಸಿತ್ತು. ಈ ವೇಳೆ ಜನರು ಗುಂಪು ಸೇರಿ ವಿರೋಧ ವ್ಯಕ್ತ ಪಡಿಸಲು ಪ್ರಾರಂಭಿಸಿ ಅವರೊಂದಿಗೆ ಮತ್ತಷ್ಟು ಜನ ಸೇರಿಕೊಂಡು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಇದರಿಂದ ಇಬ್ಬರು ಮಹಿಳಾ ವೈದ್ಯರು ಗಾಯಗೊಂಡಿದ್ದು ಬಳಿಕ ತಹಸಿಲ್ದಾರ್ ವಾಹನದಲ್ಲಿ ಅಡಗಿ ಕುಳಿತುಕೊಳ್ಳುವ ಪ್ರಾಣ ರಕ್ಷಿಸಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಕೊರೊನಾ ವೈರಸ್ ಸೊಂಕೀನ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೆ ಇದ್ದದ್ದು ಹಾಗೂ ಸಾಮಾಜಿಕ ಜಾಲತಾಣಗಳಿಂದ ಹರಡಿರುವ ಊಹಾಪೋಹಗಳಿಂದ ಇಂಥ ಘಟನೆ ನಡೆದಿದೆ ಎಂದು ತನಿಖಾಧಿಕಾರಿಯೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. ಮಧ್ಯ ಪ್ರದೇಶದಲ್ಲಿ ದೃಢಪಟ್ಟಿರುವ ಒಟ್ಟು ಪ್ರಕರಣಗಳು 98 ಇವುಗಳಲ್ಲಿ ಇಂದೋರ್ನಲ್ಲಿ 12 ಹೊಸ ಪ್ರಕರಣಗಳು ಪತ್ತೆಯಾಗಿದೆ.