ನವದೆಹಲಿ, ಎ.02 (Daijiworld News/MB) : ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಸೋಂಕಿತರ ಪೈಕಿ ಓರ್ವರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ತಂಡದ ಸದಸ್ಯರಾಗಿದ್ದು ಕರ್ತವ್ಯದ ಸಮಯದಲ್ಲಿ ಈ ಸೋಂಕು ತಗುಲಿರುವುದು ದೃಢವಾಗಿದೆ. ಹಾಗೆಯೇ ಇನ್ನೊಬ್ಬ ಮಹಿಳಾ ವೈದ್ಯರು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಅಭ್ಯಸಿಸುತ್ತಿದ್ದು, ವಿದೇಶಿ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಈ ಇಬ್ಬರು ವೈದ್ಯರಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಮಂಗಳವಾರ ಸೋಂಕು ಇರುವುದು ದೃಢವಾಗಿದೆ.
ಸಫ್ದರ್ಜಂಗ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಇಬ್ಬರು ಸೋಂಕಿತರನ್ನು ಇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಇಬ್ಬರು ಸೋಂಕಿತರ ಸಂಪರ್ಕಕ್ಕೆ ಬಂದಿರುವ ಎಲ್ಲ ವೈದ್ಯರು ಮತ್ತು ಸಿಬ್ಬಂದಿಯನ್ನು ಪರೀಕ್ಷಿಸಲಾಗಿದ್ದು, ಇಲ್ಲಿಯವರೆಗೆ ಬೇರೆ ಯಾರಲ್ಲೂ ಕೊರೊನಾ ಸೋಂಕು ಇರುವುದು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.