ಬೆಂಗಳೂರು, ಎ.02 (Daijiworld News/MB) : ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ರಾಜ್ಯದಲ್ಲಿ 7,8,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು 7,8,9 ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದಿಲ್ಲ. ಮುಂದಿನ ತರಗತಿಗೆ ಭಡ್ತಿ ಮಾಡಲಾಗುವುದು. ಸಿಬಿಎಸ್ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಉತ್ತೀರ್ಣಗೊಳಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ 1 ರಿಂದ 7 ನೇ ತರಗತಿ ಹಾಗೂ 8-9 ಪ್ರೌಢಶಾಲಾ ಮಕ್ಕಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಪರೀಕ್ಷೆಯ ಕುರಿತಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ.
ಹಾಗೆಯೇ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಬಗ್ಗೆ ಎಪ್ರಿಲ್ 14 ರ ಬಳಿಕ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.
ಇನ್ನು 9ನೇ ತರಗತಿ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್(ರೂಪಣಾತ್ಮಕ), ಸಮ್ಮೇಟೀವ್(ಸಂಕಲನಾತ್ಮಕ) ಪರೀಕ್ಷೆ ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ. ಈ ಎರಡು ಆಂತರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಶಾಲೆಗಳು ಸೂಕ್ತ ತರಭೇತಿ ಹಾಗೂ ಮಾರ್ಗದರ್ಶನ ನೀಡಿ , 20-21 ರ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅಗತ್ಯವಾದ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.