ಹುಬ್ಬಳ್ಳಿ, ಎ.02 (Daijiworld News/MB) : ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ 1 ವರ್ಷದ ವೇತನವನ್ನು ನೀಡಿದ್ದಾರೆ.
ಈ ಕುರಿತಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಇವರು ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದು ಸೋಂಕು ಲಕ್ಷಣ ಇರುವವರಿಗೆ ಹಾಗೂ ಸೋಂಕಿತರಿಗೆ ಸರ್ಕಾರವೇ ಚಿಕಿತ್ಸೆ ಒದಗಿಸುತ್ತಿದೆ. ಸಾರ್ವಜನಿಕರು ಈ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ಉದಾರ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಮೂರು ತಿಂಗಳ ಸಂಬಳ ಹಾಗೂ ಸಚಿವ ಈಶ್ವರಪ್ಪ ಅವರು ತಮ್ಮ 4 ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ನೀಡಿದ್ದರು.
ಈವರೆಗೆ ರಾಜ್ಯದಲ್ಲಿ 121 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ದೇಶದಲ್ಲಿ 2094 ಮಂದಿಗೆ ಸೋಂಕು ತಗುಲಿದೆ.