ಬೆಂಗಳೂರು, ಎ.04 (Daijiworld News/MB) : ಪ್ರಪಂಚಾದಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ರಾಜ್ಯದಲ್ಲಿ ನಾಲ್ಕನೇ ಬಲಿಯಾಗಿದೆ.
ಬಾಗಲಕೋಟೆಯ ಮಾರುಕಟ್ಟೆ ಪ್ರದೇಶದಲ್ಲಿ ಖಾದ್ಯ ತೈಲ ಚಿಲ್ಲರೆ ಮಾರಾಟ ಅಂಗಡಿ ಇಟ್ಟುಕೊಂಡಿದ್ದ 75 ವರ್ಷದ ವೃದ್ಧ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಇವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಕಾರಣದಿಂದಾಗಿ ಅವರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಕೊರೊನಾ ಸೋಂಕಿನ ಕಾರಣದಿಂದಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.