ನವದೆಹಲಿ, ಎ.04 (Daijiworld News/MB) : ಕೊರೊನಾ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರದ ಗೃಹ ಸಚಿವಾಲಯವು ಶುಕ್ರವಾರ ಆಯಾ ರಾಜ್ಯಗಳ ಅಪಾಯ ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ಅಡಿ ₹11,092 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದ್ದು ಕರ್ನಾಟಕಕ್ಕೆ ಈ ಮೂಲಕ ₹ 395.50 ಕೋಟಿ ಒದಗಿಸಲಾಗಿದೆ.
ಕೊರೊನಾ ದೇಶದಲ್ಲಿ ಹೆಚ್ಚುತ್ತಿರುವ ಕಾರಣದಿಂದಾಗಿ ದೇಶದ ಪ್ರಸ್ತುತ ಸ್ಥಿತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಯವರ ಜೊತೆ ವಿಡಿಯೊ ಕಾನ್ಫರನ್ಸ್ ಮೂಲಕ ಚರ್ಚಿಸಿ ಅನುದಾನ ನೀಡುವ ಭರವಸೆ ನೀಡಿದ್ದರು.
ಕೇಂದ್ರವು ಮಾರ್ಚ್ 13ರಂದು ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಅಗತ್ಯವಿರುವ ಅನುದಾನವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಪಡೆಯಲು ಅವಕಾಶ ನೀಡಿದ್ದು ಇದೀಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದೆ.