ನವದೆಹಲಿ, ಎ.04 (DaijiworldNews/PY) : ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲು ಎ.8ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ಆರಂಭವಾದ ಬಳಿಕ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳ ನಾಯಕರೊಂದಿಗೆ ನಡೆಸುತ್ತಿರುವ ಮೊದಲ ಸಭೆ ಇದಾಗಿದ್ದು, ಮ್ರಧಾನಿ ಮೋದಿ ಅವರು ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.
ಈ ವಿಚಾರವಾಗಿ ಪತ್ರ ಬರೆದಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು, ಐವರು ಸದಸ್ಯರು ಲೋಕಸಭೆಯಲ್ಲಿದ್ದು, ವಿಡಿಯೋ ಕಾನ್ಫರೆನ್ಸ್ನಲ್ಲಿ ಸಭಾನಾಯಕರಾಗಿರುವವರು ಮಾತ್ರ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸೋಂಕು ಹರಡದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ವಿಚಾರವಾಗಿ ಚರ್ಚೆ ನಡೆಸಲಾಗುವುದು ಹಾಗೂ ಸೋಂಕಿನ ವಿರುದ್ದದ ಹೋರಾಟದಲ್ಲಿ ಒಮ್ಮತದ ರಾಜಕೀಯ ಸಹಮತ ಮೂಡಿಸುವುದು ಸೌಎಯ ಉದ್ದೇಶವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.