ನವದೆಹಲಿ, ಎ.06 (DaijiworldNews/PY) : ದೇಶದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯುವ ನಿರ್ಧಾರವನ್ನು ಎ.14ರ ನಂತರ ಪರಿಸ್ಥಿತಿ ನೋಡಿಕೊಂಡು ಕೈಗೊಳ್ಳಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ದಿ ಖಾತೆ ಸಚಿವ ತಿಳಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಕಷ್ಟವಾಗಿದೆ ಎಂದು ಹೇಳಿದರು.
ಅಂದಿನ ಸನ್ನಿವೇಶಕ್ಕೆ ಅನುಗುಣವಾಗಿ ಲಾಕ್ಡೌನ್ ತೆರವುಗೊಂಡರೆ ತೀರ್ಮಾನ ಕೈಗೊಳ್ಳಲಾಗುವುದು. ಒಂದು ವೇಳೆ ಲಾಕ್ಡೌನ್ ವಿಸ್ತರಿಸುವುದು ಅಗತ್ಯವಾಗಿದ್ದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸರ್ಕಾರ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತಕಾಯಲು ಬದ್ದವಾಗಿದೆ. ಆದಷ್ಟು ಬೇಗ ಈಗಾಗಲೇ ಮುಂದೂಡಲಾಗಿರುವ ಪರೀಕ್ಷೆಗಳನ್ನು ನಡೆಸಲು ಚಿಂತಿಸಲಾಗುವುದು ಎಂದು ತಿಳಿಸಿದರು.