ಲಖ್ನೋ, ಎ.06 (DaijiworldNews/PY) : ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ 21 ದಿನಗಳ ಕಾಲ ಜಾರಿಗೊಳಿಸಿರುವ ಲಾಕ್ಡೌನ್ ಎ.14ಕ್ಕೆ ಮುಕ್ತಾಯವಾಗಲಿದೆ.
ಇದೇ ಸಂದರ್ಭ ಲಾಕ್ಡೌನ್ ಎ.15ರಂದು ತೆರವುಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲಾಕ್ಡೌನ್ ಎ.15ರಂದು ತೆರವುಗೊಳಿಸಲಾಗುವುದು. ಜನದಟ್ಟಣೆಯಾಗದಂತೆ ನಿಯಂತ್ರಿಸುವುದು ದೊಡ್ಡ ಸವಾಲಾಗಿದೆ. ಇಲ್ಲವಾದಲ್ಲಿ ಇಷ್ಟು ದಿನಗಳ ಕಾಲ ತೆಗೆದುಕೊಂಡ ಎಲ್ಲಾ ಪ್ರಯತ್ನಗಳು ವಿಫಲವಾಗುತ್ತದೆ ಎಂದಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರಪ್ರದೇಶದ ಸಂಸದರೊಂದಿಗೆ ಸಭೆ ನಡೆಸಿದ ಯೋಗಿ ಆದಿತ್ಯನಾಥ್ ಅವರು, ಜನ ದಟ್ಟಣೆ ನಿಯಂತ್ರಿಸಲು ಕಾರ್ಯಕ್ರಮ ಆಯೋಜಿಸಬೇಕಿದ್ದು, ಈ ನಿಟ್ಟಿನಲ್ಲಿ ಸಲಹೆ ನೀಡುವಂತೆ ಕೇಳಿದ್ದಾರೆ. ಎ.15ರಂದು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡು ಲಾಕ್ಡೌನ್ ತೆರವುಗೊಳಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.