ಬೆಂಗಳೂರು, ಏ 07(Daijiworld News/MSP): ದೇಶಕ್ಕೆ ಕೊರೊನಾ ಚಿಂತೆಯಾದ್ರೆ ಕುಡುಕರಿಗೆ ಮದ್ಯ ಸಿಗುತ್ತಿಲ್ಲ ಎಂಬ ಚಿಂತೆಯೇ ಜೋರಾಗಿದೆ. ಮದ್ಯವ್ಯಸನಿಗಳು ಮದ್ಯ ಸಿಗುತ್ತಿಲ್ಲ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ. ಈ ಮದ್ಯೆ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ಮದ್ಯದ ಅಂಗಡಿಗಳು ಬಂದ್ ಆಗಿರುವ ಹಿನ್ನಲೆಯಲ್ಲಿ , ಮದ್ಯ ಸಿಗದೇ ಪರದಾಡುವಂತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಕೊರೊನಾ ಸೋಂಕಿಗೆ 4 ಜನರು ಬಲಿಯಾಗಿದ್ದು, ಅದಕ್ಕಿಂತ ಹೆಚ್ಚಾಗಿ ಮದ್ಯ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯೇ ಹೆಚ್ಚಾಗಿದೆ. ಮದ್ಯವ್ಯಸನಿಗಳು ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದಾರೆ.
ಹೀಗಾಗಿ ವೈನ್ ಶಾಪ್ ಓಪನ್ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ಡಾ.ವಿನೋದ್ ಕುಲಕರ್ಣಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದನ್ನು ಹೈಕೋರ್ಟ್ ಗೆ ಸಲ್ಲಿಸಿದ್ದು ಮದ್ಯದಂಗಡಿ ತೆರೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂಬುದಾಗಿ ನ್ಯಾಯಪೀಠಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.