ಲಕ್ನೋ, ಏ 08 (Daijiworld News/MSP): COVID-19 ರ ದೃಷ್ಟಿಯಿಂದ ಉತ್ತರ ಪ್ರದೇಶ ಸರ್ಕಾರ ಪೊಲೀಸ್ ಸಿಬ್ಬಂದಿಗೆ 50 ಲಕ್ಷ ರೂ.ಗಳ ಆರೋಗ್ಯ ವಿಮೆಯನ್ನು ಘೋಷಿಸಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಬುಧವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ ಶೀಘ್ರದಲ್ಲೇ ಇದರ ಬಗ್ಗೆ ಲಿಖಿತ ಆದೇಶವನ್ನು ಬಿಡುಗಡೆ ಮಾಡಲಿದೆ ಎಂದು ಅವಸ್ಥಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಸರ್ಕಾರಕ್ಕೂ ಮುಂಚೆ ಪಂಜಾಬ್ ಸರ್ಕಾರವು 50 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆಯನ್ನು ಪೊಲೀಸ್ ಮತ್ತು ನೈರ್ಮಲ್ಯ ಕಾರ್ಮಿಕರಿಗೆ ನೀಡುವುದಾಗಿ ಘೋಷಿಸಿತ್ತು. ದೆಹಲಿ ಹಾಗೂ ಬೋಪಾಲ್ ನಲ್ಲಿ ಪೊಲೀಸರಲ್ಲೂ ಕೊರೊನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಪೊಲೀಸರಿಗೆ ವಿಮಾ ಯೋಜನೆಯನ್ನು ಘೋಷಿಸಿದೆ.
ಇದೇ ವೇಳೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಸ್ಥಿ COVID-19 ಗೆ ಸಂಬಂಧಿಸಿದ ನಕಲಿ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ವಿರುದ್ಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜನರಿಗೆ ಎಚ್ಚರಿಕೆ ನೀಡಿದರು.