ಬೆಂಗಳೂರು, ಏ 08 (DaijiworldNews/SM): ಕೇಂದ್ರ ಸರಕಾರ ಹೊರಡಿಸಿರುವ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಸಂಕಷ್ಟಕ್ಕೀಡಾಗಿದೆ. ಆದರೆ, ಕೊರೊನಾ ನಿಯಂತ್ರಣಕ್ಕೆ ಇದು ಅಗತ್ಯ ಹಾಗೂ ಅನಿವಾರ್ಯವಾಗಿದ್ದು, ಒಂದೊಮ್ಮೆ ಕೇಂದ್ರ ಸಮ್ಮತಿಸಿದರೆ, ರಾಜ್ಯದ ಕೊರೊನಾ ಸೋಂಕು ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಖ್ ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಲಾಕ್ ಡೌನ್ ಕೊನೆಗೊಂದ ಬಳಿಕ ರಾಝ್ಯದ ಆದಾಯ ಹೆಚ್ಚಳಾದ ದೃಷ್ಠಿಯಿಂದ ಮದ್ಯ ಮಾರಾಟದ ಮೇಲಿನ ನಿರ್ಬಂಧವನ್ನು ಸಡಿಲಗೊಳಿಸಲು ಚಿಂತನೆ ನಡೆಸಲಾಗಿದೆ ಎಂದರು. ಇನ್ನು ಈಗಾಗಲೇ ಲಾಕ್ ಡೌನ್ ನಿಂದಾಗಿ ಹಲವು ಜನರು ಸಮಸ್ಯೆಗೆ ಒಳಗಾಗಿದ್ದಾರೆ. ಕೆಲವು ಕಂಪೆನಿಗಳು ಹಾಗೂ ಸಂಸ್ಥೆಗಳು ಕಾರ್ಯ ಸ್ಥಗಿತಗೊಳಿಸಿದ ಕಾರಣ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಇವರನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ಸಡಿಲಿಸಲು ಚಿಂತನೆ ನಡೆಸಲಾಗಿದೆ ಎಂದರು.
ಕೇಂದ್ರದ ಅನುಮೋದನೆ ಪಡೆದ ನಂತರ ಏಪ್ರಿಲ್ 14 ರ ಬಳಿಕ ಜನರು ಆಯಾ ಜಿಲ್ಲೆಗಳೊಳಗೆ ತಮ್ಮ ವ್ಯವಹಾರವನ್ನು ಮಾಡಿಕೊಳ್ಳಲು ಅನುಮತಿ ಕೋರಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.