ಬೆಂಗಳೂರು, ಎ.09 (DaijiworldNews/PY) : ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರಿ ನೌಕರರು ಸೇವೆಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವುದಕ್ಕೆ ಸಿಎಂ ಬಿಎಸ್ವೈ ಅವರು ಅಭಿನಂದನೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಿಎಂ, ಕೊರೊನಾ ವೈರಸ್ ವಿರುದ್ದದ ಹೋರಾಟದಲ್ಲಿ ಸರ್ಕಾರಿ ನೌಕರರು ಸರ್ಕಾರಕ್ಕೆ ಸಹಾಯ ಮಾಡಲು ಒಂದಿ ದಿನದ ಸಂಬಳವನ್ನು ಮುಖ್ತಮಂತ್ರಿ ಪರಿಹಾರ ನಿಧಿಗೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರದ ಮೇಲೆ ವಿಶ್ವಾಸವಿಟ್ಟು ನೀಡಿರುವ ದೇಣಿಗೆಯನ್ನು ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಸದ್ಭಳಕೆ ಮಾಡಿಕೊಳ್ಳುವುದಾಗಿ ತಿಳಿಸಿರುವ ಸಿಎಂ ಅವರು, ಸರ್ಕಾರಿ ನೌಕರರು ಅತಿವೃಷ್ಟಿ, ಅನಾವೃಷ್ಟಿಯಂಥ ಪ್ರಕೃತಿ ವಿಕೋಪ ಉಂಟಾದ ಸಮಯದಲ್ಲಿಯೂ ಸಹಕಾರ ನೀಡಿರುವುದನ್ನು ಶ್ಲಾಘಿಸಿದ್ದು, ಹೀಗೆಯೇ ಸರ್ಕಾರಿ ನೌಕರರ ಸಹಕಾರ ಮುಂದುವರಿಯಲಿ ಎಂದು ಹೇಳಿದ್ದಾರೆ.