ದಾವಣಗೆರೆ, ಎ.10 (Daijiworld News/MB) : ಕಾಂಗ್ರೆಸ್ ಮುಖಂಡ ಸುಭಾಶ್ ಚಂದ್ರ ಮುಸ್ಲಿಮರ ವಿರುದ್ಧವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಇಲ್ಲಿನ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ತಬ್ಲೀಗಿಗಳು ಚಿಕಿತ್ಸೆಗೆ ಸ್ಪಂದನೆ ನೀಡದಿದ್ದಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಶಾಂತಿ ಕದಡುವಂತಹ ಹೇಳಿಕೆ ನೀಡಿರುವ ರೇಣುಕಾಚಾರ್ಯ ವಿರುದ್ಧವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಾಗೆಯೇ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.