ಒಡಿಶಾ, ಎ.10 (DaijiworldNews/PY) : ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಾಲಾ ಶುಲ್ಕ ಪಾವತಿಸಲು ಹಲವರಿಗೆ ಕಷ್ಟವಾಗುತ್ತಿದ್ದು, ಎಪ್ರಿಲ್ನಿಂದ ಜೂನ್ವರೆಗೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕ ಪಾವತಿಸುವುದನ್ನು ಮುಂದೂಡುವಂತೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಲಹೆ ನೀಡಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಇದು ಹಲವು ಪೋಷಕರ ಆರ್ಥಿಕ ಪರಿಸ್ಥಿತಿಯ ಮೇಲೆ ದುಷ್ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಶುಲ್ಕ ಪಾವತಿಸುವುದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದೂಡಬೇಕು. ಸಾಧ್ಯವಾದಲ್ಲಿ ಕಡಿಮೆ ಮಾಡಬೇಕು ಎಂದು ತಿಳಿಸಿದ್ದಾರೆ.