ಮೈಸೂರು, ಎ.11 (Daijiworld News/MB) : ಕೊರೊನಾ ವೈರಸ್ ಮೈಸೂರಿನಲ್ಲಿ ಬಲು ಶೀಘ್ರವಾಗಿ ಹರಡುತ್ತಿದ್ದು ಕೊರೊನಾ ಪ್ರಕರಣ 42ಕ್ಕೆ ಏರಿಕೆ ಆಗಿದೆ. ಏತನ್ಮಧ್ಯೆ ಮೊದಲು ಕೊರೊನಾ ಪ್ರಕರಣದ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ 8 ವರ್ಷದ ಬಾಲಕನಿಗೂ ಸೋಂಕು ತಗುಲಿದ್ದು ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆ ನೌಕರರ ಸಂಪರ್ಕಿತ ವ್ಯಕ್ತಿಗಳಿಗೂ ಸೋಂಕು ದೃಢವಾಗಿದೆ. ಸೋಂಕಿತರ ಪುತ್ರ ಹಾಗೂ ಪತ್ನಿಗೂ ಸೋಂಕು ಹರಡಿದೆ.
ಈ ನಡುವೆ ಮೈಸೂರಿನಲ್ಲಿ ಎರಡನೇ ಕೊರೊನಾ ಪಾಸಿಟಿವ್ ಸೋಂಕಿತ ಡಿಸ್ವಾರ್ಜ್ ಆಗಿದ್ದಾನೆ. ಜ್ಯೂಬಿಲಿಯೆಂಟ್ ಕಾರ್ಖಾನೆಯ ಮೊದಲ ಸೋಂಕಿತನಾಗಿದ್ದ ಆತ ಗುಣಮುಖನಾಗಿದ್ದಾನೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅಧಿಕೃತ ಮಾಹಿತಿ ನೀಡಿದ್ದಾರೆ.
ಆದರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಆತ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದು, "10 ದಿನಗಳ ಹಿಂದೆ ನನಗೆ ಜ್ವರ ಇತ್ತು. ಮೊದಲು ಸ್ಥಳೀಯ ಕ್ಲಿನಿಕ್ಗೆ ತೋರಿಸಿದದೆ. ಬಳಿಕ ಮಾರ್ಚ್ 21ರಂದು ನಾನು ಗೋಪಾಲಗೌಡ ಆಸ್ಪತ್ರೆಗೆ ದಾಖಲಾಗಿದ್ದೆ. ನಂತರ ಮಾರ್ಚ್ 25ರಂದು ಕೆ.ಆರ್.ಆಸ್ಪತ್ರೆಗೆ ಕರೆತಂದರು. ನನಗೆ ಎಲ್ಲ ರೀತಿಯ ಪರೀಕ್ಷೆ ಮಾಡಿದರು. ಮಾರ್ಚ್ 30ರಂದು ನನ್ನನ್ನು ಕೋವಿಡ್-19 ಆಸ್ಪತ್ರೆಗೆ ಕಳುಹಿಸಿದರು. 14 ದಿನಗಳ ಕಾಲ ಚಿಕಿತ್ಸೆ ನೀಡಿ ನನ್ನನ್ನು ಗುಣಮುಖರನ್ನಾಗಿ ಮಾಡಿದ್ದಾರೆ. ಸೋಂಕು ಪೀಡಿತರನ್ನು ಸರ್ಕಾರ ಚೆನ್ನಾಗಿ ನೋಡಿಕೊಳ್ಳುತ್ತಿದೆ. ಎಲ್ಲರೂ ಸರ್ಕಾರಕ್ಕೆ ಸಹಕಾರ ನೀಡಿ. ಆದರೆ ನಾನು ಮಾತ್ರ ಈಗಲೇ ಮನೆಗೆ ಹೋಗಲ್ಲ, ನಾನು ಕ್ವಾರಂಟೈನ್ಗೆ ಒಳಗಾಗಿದ್ದೇನೆ" ಎಂದು ಹೇಳಿದ್ದಾನೆ.