ಬೆಂಗಳೂರು, ಎ.11 (DaijiworldNews/PY) : ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೋರ್ವ ಬಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ ಏರಿದೆ.
ಸೋಂಕಿತ ಸಂಖ್ಯೆ 92ರ ವ್ಯಕ್ತಿಯ ಸಂಪರ್ಕಕ್ಕೆ ಬಂದ 10 ವರ್ಷದ ಮಗನಿಗೆ ಸೋಂಕು ತಾಗಿದೆ.
ಶನಿವಾರ ರಾಜ್ಯದಲ್ಲಿ ಒಟ್ಟು 8 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ ಏರಿದೆ.
ಇದುವರೆಗೆ ರಾಜ್ಯದಲ್ಲಿ ಆರು ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಆರು ಜನರು ಸೋಂಕಿನ ಕಾರಣದಿಂದ 39 ಜನರು ಚಿಕಿತ್ಸೆ ಮುಗಿಸಿ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯದಲ್ಲಿ ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 215 ಸೋಂಕಿತರಲ್ಲಿ 6 ಸೋಂಕಿತರು ಕೇರಳದವರು ಎನ್ನಲಾಗಿದೆ.