ಬೆಂಗಳೂರು, ಎ.12 (DaijiworldNews/PY) : ಕೊರನಾ ಸಂಬಂಧ ತಬ್ಲಿಘಿ ಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ಕೇಸ್ ದಾಖಲಿಸಿರುವುದು ಅತಿರೇಕದ ವರ್ತನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನನ್ನ ಸಹೋದ್ಯೋಗಿಗಳಾದ ಅವರಲ್ಲಿ ವಿನಂತಿಸಿದ್ದೇನೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.