ನವದೆಹಲಿ, ಎ.13 (Daijiworld News/MB) : ಕೊರೊನಾ ಸೋಂಕಿನಿಂದ ವಿಶ್ವವೇ ತತ್ತರಿಸಿ ಹೋಗಿರುವ ಈ ಸಂದರ್ಭದಲ್ಲಿ ವಿದೇಶದಲ್ಲಿರುವ ಎಲ್ಲಾ ಭಾರತೀಯರನ್ನು ಭಾರತಕ್ಕೆ ವಾಪಾಸ್ ಕರೆದುಕೊಂಡು ಬರಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದು ಈ ಅರ್ಜಿ ವಿವಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲು ಮುಂದೂಡಿದೆ.
ವಿದೇಶದಲ್ಲಿ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು ಅಲ್ಲಿ ಇರಿವ ಭಾರತೀಯರು ಕೂಡಾ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ವಿದೇಶದಲ್ಲಿರುವ ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆಸಿಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು ಇದೀಗ ಇದರ ವಿಚಾರಣೆ ನಾಲ್ಕು ವಾರಗಳ ಕಾಲ ಮುಂದೂಡಿಕೆಯಾಗಿದ್ದು ವಿದೇಶದಲ್ಲಿರುವ ಭಾರತೀಯರ ಕುಟುಂಬಕ್ಕೆ ಆತಂಕ ಉಂಟಾಗಿದೆ.
ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಅಂತರ್ ರಾಷ್ಟ್ರೀಯ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದ್ದು ವಿದೇಶದಲ್ಲಿರುವವರ ಭಾರತೀಯರು ಅಲ್ಲೇ ಉಳಿಯಬೇಕಾದ ಪರಿಸ್ಥಿತಿ ಉಂಟಾಗಿದೆ.