ಕಲಬುರಗಿ, ಏ 13 (DaijiworldNews/SM): ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಆದರೆ, ಮತ್ತೆ ಕೆಲವು ಪ್ರದೇಶಗಳಲ್ಲಿ ಸೋಂಕು ನಿಯಂತ್ರಣ ಕಳೆದುಕೊಳ್ಳುತ್ತಿದೆ. ಪರಿಣಾಮ ಇದೀಗ ರಾಜ್ಯದಲ್ಲಿ ಮತ್ತೊಂದೆ ಸಾವು ಸಂಭವಿಸಿದೆ.
ದೇಶದಲ್ಲೇ ಮೊದಲ ಸೋಂಕು ಪತ್ತೆಯಾಗಿದ್ದ ಕಲಬುರಗಿಯಲ್ಲೇ ಈ ಸಾವು ಸಂಭವಿಸಿದೆ. ಆ ಮೂಲಕ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಕಲಬುರಗಿಯ ಇಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ವ್ಯಕ್ತಿ ಪಕ್ಕದ ಮನೆಯಲ್ಲಿರುವ ತಬ್ಲಿಘ್ ಸಮಾವೇಶದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಡನೆ ಸಂಪರ್ಕದಲ್ಲಿದ್ದರು.
ಅನಾರೋಗ್ಯ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಇವರಲ್ಲಿ ಸೋಂಕು ಲಕ್ಷಗಳು ಕಂಡುಬಂದಿದ್ದು, ಪಾಸಿಟಿವ್ ಎಂಬುವುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಅವರಿಗೆ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.