ಬೆಂಗಳೂರು, ಏ 14 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.
ಬೆಂಗಳೂರು ಮೂಲದ 76 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಾರ್ಚ್ 12ರಂದು ವೃದ್ಧನಲ್ಲಿ ಸೋಂಕು ಕಂಡುಬಂದಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತೀವ್ರ ಉಸಿರಾಟದ ತೊಂದರೆಯಿಂಡಾಗಿ ವೃದ್ಧ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ.
ಈ ಮೂಲಕ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಹೈ ಅಲರ್ಟ್ ಕೈಗೊಳ್ಳಲಾಗಿದೆ. ಸೋಂಕು ತಡೆಗೆ ವಿವಿಧ ರೀತಿಯಲ್ಲಿ ಸಿದ್ಧತೆಗಳನ್ನು ನಡೆಸಲಾಗಿದ್ದು, ಬುಧವಾರದಿಂದ ಲಾಕ್ ಡೌನ್ ಮತ್ತಷ್ಟು ತೀವ್ರಗೊಳಿಸಲಾಗಿದೆ.