ಮುಂಬೈ, ಎ.15 (Daijiworld News/MB) : ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಮಡ ಘಟನೆ ಮುಂಬೈನಲ್ಲಿ ನಡೆದಿದೆ.
ಅಸ್ತಮಾದಲ್ಲಿ ಬಳಲುತ್ತಿದ್ದ ಮುಬೈನ ವರ್ಲಿ ನಿವಾಸಿ ಮಹಿಳೆಯನ್ನು ಸೋಮವಾರ ನಾಯರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಮಂಗಳವಾರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಇಂದು ಮುಂಜಾನೆ ಬಾತ್ರೂಂಗೆ ಹೋದ ಮಹಿಳೆ ಅಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಮಹಿಳೆ ಖಿನ್ನತೆಯಿಂದ ಬಳಲುತ್ತಿದ್ದು ಈ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅಗ್ರಿಪಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.