ನವದೆಹಲಿ, ಏ 15 (DaijiworldNews/SM): ಈಗಾಗಲೇ ದೇಶದೆಲ್ಲೆಡೆ ಲಾಕ್ ಡೌ ಆದೇಶವನ್ನು ಮುಂದುವರೆಸಿ ಕೇಂದ್ರ ಸರಕಾರ ಆದೇಶ ನೀಡಿದೆ. ಇದೀಗ ಮುಂದುವರೆದು ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ದೇಶದೆಲ್ಲೆಡೆ ಕಂಡುಬಂದಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ಆಧಾರದ ಮೇಲೆ ವಿಂಗಡನೆ ಮಾಡಲಾಗಿದೆ. ಅದರಂತೆ ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ಹಾಟ್ ಸ್ಪಾಟ್, ನಾನ್ ಹಾಟ್ ಸ್ಪಾಟ್ ಮತ್ತು ಗ್ರೀನ್ ಎಂದು ವಿಭಜಿಸಲಾಗಿದೆ.
ಅದರಂತೆ ದೇಶಾದ್ಯಂತ ಒಟ್ಟು 170 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲೂ ತಪಾಸಣೆ ನಡೆಸಲಾಗುತ್ತದೆ. ಇದುವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗದ ಜಿಲ್ಲೆಗಳಲ್ಲಿ ಏಪ್ರಿಲ್ 20ರ ನಂತರ ಲಾಕ್ ಡೌನ್ ಸಡಿಲಗೊಳಿಸಲಾಗುವುದು ಎಂಬ ಮಾಹಿತಿ ನೀಡಿದ್ದಾರೆ.