ಬೆಂಗಳೂರು, ಏ 15(DaijiworldNews/SM): ಒಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಬೇಕೆನ್ನುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಕ್ರಮಕೈಗೊಳ್ಳಲಾಗಿದ್ದರೂ, ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುವಂತೆ ತೋಚುತ್ತಿಲ್ಲ. ಬುಧವಾರದಂದು ಮತ್ತೊಬ್ಬರು ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಬುಧವಾರವೂ ಸೋಂಕಿಗೆ ಮತ್ತೊಬ್ಬರು ಬಲಿಯಾಗುವ ಮೂಲಕ ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿದಿದೆ. ಇಂದು ಬೆಳಗಾವಿಯ 80 ವರ್ಷದ ವೃದ್ಧೆಯೊಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾಗೆ ಮೂವರು ಬಲಿಯಾದಂತಾಗಿದೆ.
ಇನ್ನು ರಾಜ್ಯದಲ್ಲಿ ಬುಧವಾರ ಒಂದೇ ದಿನವೇ ಒಟ್ಟು 19 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿದೆ. ಆ ಪೈಕಿ 80 ಮಂದಿ ಗುಣಮುಖರಾಗಿದ್ದಾರೆ.